ಬದುಕಿನ ಬಣ್ಣಗಳು - Shades of life
ಇಲ್ಲಿ ನನ್ನ ಮನದ ಮಾತುಗಳಿಗೆ ಲೇಖನಿ ಮತ್ತು ಕುಂಚ ಎರಡೂ ಸ್ಪಂಧಿಸಿವೆ. ಬರಹವೂ ಇದೆ ಚಿತ್ರಗಳೂ ಇವೆ. This is the place where I am trying to express myself through writings and paintings
Wednesday, September 16, 2015
Sunday, October 12, 2014
Sunday, October 5, 2014
ಕೆ.ಎಸ್.ನರಸಿಂಹಸ್ವಾಮಿಯವರ ’ಅಕ್ಕಿ ಆರಿಸುವಾಗ’ ಕವನಕ್ಕೆ ನನ್ನ ಕುಂಚ ಸ್ಪಂಧಿಸಿದ್ದು ಹೀಗೆ. ನಾನು ಮನುಷ್ಯರನ್ನು ಅಷ್ಟು ಚೆನ್ನಾಗಿ ಚಿತ್ರಿಸುತ್ತಿಲ್ಲ. ಆದರೂ ಇದೊಂದು ಪ್ರಯತ್ನ.
ಅಕ್ಕಿ ಆರಿಸುವಾಗ
ಅಕ್ಕಿಯಾರಿಸುವಾಗ ಚಿಕ್ಕ ನುಚ್ಚಿನ ನಡುವೆ
ಬಂಗಾರವಿಲ್ಲದ ಬೆರಳು;
ತಗ್ಗಿರುವ ಕೊರಳಿನ ಸುತ್ತ ಕರಿಮಣಿಯೊಂದೆ
ಸಿಂಗಾರ ಕಾಣದ ಹೆರಳು;
ಹೆರಳಿನ ಭಾರಕ್ಕೆ ತುಂಬಿರುವ ಕೆನ್ನೆಯಲಿ
ಹದಿನಾರು ವರುಷದ ನೆರಳು;
ದೀಪದಂತರಳಿದ ಸಿರಿಗಣ್ಣ ಸನ್ನೆಯಲಿ
ಹುಚ್ಚುಹೊಳೆ, ಮುಂಗಾರಿನುರುಳು;
ಕಲ್ಲ ಹರಳನು ಹುಡುಕಿ ಎಲ್ಲಿಗೋ ಎಸೆವಾಗ
ಜಲ್ಲೆನುವ ಬಳೆಯ ಸದ್ದು;
ಅತ್ತ ಯಾರೋ ಹೋದ ಇತ್ತ ಯಾರೋ ಬಂದ
ಕಡೆಗೆಲ್ಲ ಕಣ್ಣು ಬಿದ್ದು,
ಮನೆಗೆಲಸ ಬೆಟ್ಟದಷ್ಟಿರಲು ಸುಮ್ಮನೆ ಇವಳು
ಚಿತ್ರದಲಿ ತಂದಂತೆ ಇಹಳು.
ಬೇಸಿರಿಯ ಕಿರುಮುತ್ತು ನುಚ್ಚಿನಲಿ ಮುಚ್ಚಿರಲು
ಹುಡುಕುತ್ತಿವೆ ಆ ಹತ್ತು ಬೆರಳು!
ಕೆ ಎಸ್. ನರಸಿಂಹಸ್ವಾಮಿ
ಅಕ್ಕಿ ಆರಿಸುವಾಗ
ಅಕ್ಕಿಯಾರಿಸುವಾಗ ಚಿಕ್ಕ ನುಚ್ಚಿನ ನಡುವೆ
ಬಂಗಾರವಿಲ್ಲದ ಬೆರಳು;
ತಗ್ಗಿರುವ ಕೊರಳಿನ ಸುತ್ತ ಕರಿಮಣಿಯೊಂದೆ
ಸಿಂಗಾರ ಕಾಣದ ಹೆರಳು;
ಹೆರಳಿನ ಭಾರಕ್ಕೆ ತುಂಬಿರುವ ಕೆನ್ನೆಯಲಿ
ಹದಿನಾರು ವರುಷದ ನೆರಳು;
ದೀಪದಂತರಳಿದ ಸಿರಿಗಣ್ಣ ಸನ್ನೆಯಲಿ
ಹುಚ್ಚುಹೊಳೆ, ಮುಂಗಾರಿನುರುಳು;
ಕಲ್ಲ ಹರಳನು ಹುಡುಕಿ ಎಲ್ಲಿಗೋ ಎಸೆವಾಗ
ಜಲ್ಲೆನುವ ಬಳೆಯ ಸದ್ದು;
ಅತ್ತ ಯಾರೋ ಹೋದ ಇತ್ತ ಯಾರೋ ಬಂದ
ಕಡೆಗೆಲ್ಲ ಕಣ್ಣು ಬಿದ್ದು,
ಮನೆಗೆಲಸ ಬೆಟ್ಟದಷ್ಟಿರಲು ಸುಮ್ಮನೆ ಇವಳು
ಚಿತ್ರದಲಿ ತಂದಂತೆ ಇಹಳು.
ಬೇಸಿರಿಯ ಕಿರುಮುತ್ತು ನುಚ್ಚಿನಲಿ ಮುಚ್ಚಿರಲು
ಹುಡುಕುತ್ತಿವೆ ಆ ಹತ್ತು ಬೆರಳು!
ಕೆ ಎಸ್. ನರಸಿಂಹಸ್ವಾಮಿ
Subscribe to:
Posts (Atom)